ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮತ್ತೊಮ್ಮೆ ಕೃಷಿ ಜಲ ತಾಣಕ್ಕೆ ಸ್ವಾಗತ. ಈ ಲೇಖನದಲ್ಲಿ ರಾಜ್ಯದ ಮುಂದಿನ ಐದು ದಿನಗಳ ಮಳೆಯ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ.
ಹಿಂಗಾರು ಮಳೆಯು ನವಂಬರ್ ತಿಂಗಳಿನಿಂದ ಶುರುವಾಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಟ್ರಪ್ ಉಂಟಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಉತ್ತಮ ಮಳೆಯಾಗಿದೆ.
ಪಿಎಂ ಕಿಸಾನ್ 15ನೇ ಕಂತಿನ ಹಣ ಜಮಾ ..! Pm kisan 15th installment date..
Mansoon rain ಉತ್ತಮ ಮಳೆ
ರಾಜ್ಯದ ದಕ್ಷಿಣ ಒಳನಾಡು ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 15 ರಿಂದ ಉತ್ತಮ ಮಳೆ ಆಗಲಿದ್ದು,ಕರ್ನಾಟಕ ಪ್ರಾಕೃತಿಕ ವಿಕೋಪ ಬೋರ್ಡ್ ವತಿಯಿಂದ ಈ ಮಾಹಿತಿಯನ್ನು ತಿಳಿಸಲಾಗಿದೆ.
ಈಗಾಗಲೇ ನವಂಬರ್ 7ರಿಂದ ನವೆಂಬರ್ ಅಂತರವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರಿ ಪ್ರಮಾಣದ ಮಳೆಯಾಗಿದ್ದು, ಮಳೆಯಾಗುವ ಜಿಲ್ಲೆಗಳಲ್ಲಿ ಸುಮಾರು 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೃಷಿ ಭೂಮಿ ಖರೀದಿಸಲು 25 ಲಕ್ಷ ಭೂ ಒಡೆತನ ಯೋಜನೆ ಅಡಿ ಸಹಾಯಧನ. Land purchase scheme
ರಾಜ್ಯದ ಈ ಜಿಲ್ಲೆಗಳಾದ ಉತ್ತರ ಒಳನಾಡಿನ ಗದಗ ಜಿಲ್ಲೆ, ಹಾವೇರಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಮಂಡ್ಯ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ.
ನಮ್ಮ ರಾಜ್ಯದ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನವೆಂಬರ್ 15ರಿಂದ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಹೆಚ್ಚಿದೆ.
SC ST ಅಭಿವೃದ್ದಿ ನಿಗಮದ ಗಂಗಾ ಕಲ್ಯಾಣ ಯೋಜನೆ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ. Ganga kalyana yojane
ನವೆಂಬರ್ 15ರಂದು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ತುಮಕೂರು ಮೈಸೂರು ಚಾಮರಾಜನಗರ ಮಂಡ್ಯ ರಾಮನಗರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗರಿಷ್ಠ 30 ಮಿ.ಮೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.